ಗ್ಯಾರಂಟಿ ಜಾರಿಗೆ ಬಂತು ಪ್ರಾಧಿಕಾರರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ‘ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’, ‘ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’, ‘ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ’ ಹಾಗೂ ಬಿಬಿಎಂಪಿ ಮಟ್ಟದಲ್ಲಿ ‘ಬಿಬಿಎಂಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ’ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.