ಅಯೋಧ್ಯಾ ಬಾಲರಾಮನ ಶಿಲ್ಪಿ ಅರುಣ್ ಯೋಗಿರಾಜ್ ಆಗಮನದೇವನಹಳ್ಳಿ: ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಿರುವ ಬಾಲರಾಮನ ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರು ಬುಧವಾರ ರಾತ್ರಿ 9.20ಕ್ಕೆ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ನಿಂದ ಹೊರ ಬಂದ ಸಂದರ್ಭದಲ್ಲಿ ಸಹಸ್ರಾರು ಅಭಿಮಾನಿಗಳು ಅವರನ್ನು ಕಾಣಲು ಕಾತುರದಿಂದ ಕಾಯುತ್ತಿದ್ದು, ಅದ್ಧೂರಿ ಸ್ವಾಗತ ಕೋರಲು ಕಾದು ನಿಂತಿದ್ದರು.