ಪೊಲೀಸ್ ಬಳಸಿ ಪೆನ್‌ಡ್ರೈವ್ ಲೀಕ್: ಎಚ್ಡಿಕೆಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಮುಖಂಡ ದೇವರಾಜೇಗೌಡ ನೇರ ಆರೋಪ ಮಾಡಿದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೂಡ ವಾಗ್ದಾಳಿ ನಡೆಸಿದ್ದಾರೆ.