ಒತ್ತುವರಿ ಜಮೀನುಗಳ ತೆರವಿಗೆ ರೈತರ ಒತ್ತಾಯದೇವನಹಳ್ಳಿ: ತಾಲೂಕಿನ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಲೂರು ದುದ್ದನಹಳ್ಳಿ, ಬೀರಸಂದ್ರ, ಸುತ್ತಮುತ್ತಲಿನ ಗ್ರಾಮಗಳ ರೈತರು ಕೆಆರ್ಎಸ್ ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಮೀನುಗಳ ಉಳಿವಿಗಾಗಿ ಸುಮಾರು ಒಂದು ಗಂಟೆ ಕಾಲ ಪ್ರತಿಭಟನೆ ಹಮ್ಮಿಕೊಂಡಿದ್ದರು.