ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ದೇಶದಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ತಂತ್ರಜ್ಞಾನ ಬಳಸಿಕೊಂಡು ಸಂಚಾರ ನಿರ್ವಹಣೆಗೆ ಪೊಲೀಸರು ಈಗ ‘ಅಸ್ತ್ರಂ’ ಪ್ರಯೋಗಿಸಿದ್ದಾರೆ.
ಆ್ಯಂಬುಲೆನ್ಸ್ಗಳ ಸುಗಮ ಸಂಚಾರಕ್ಕೆ ಟ್ರಾಫಿಕ್ ಸಿಗ್ನಲ್ಗಳ ಜೊತೆ ವೈರ್ಲೆಸ್ ಸಂಪರ್ಕ, ಸಾರ್ವಜನಿಕ ಸ್ಥಳಗಳಲ್ಲಿ ಪಿಂಕ್ ಬೂತ್ ಸ್ಥಾಪನೆ ಸೇರಿ ಐಡಿಯಾಥಾನ್ ಸ್ಪರ್ಧೆಯ ಅತ್ಯುತ್ತಮ ಸಲಹೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.