ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಆಂಜಿನಪ್ಪ ಆಯ್ಕೆಹೊಸಕೋಟೆ: ಜನವರಿ 21 ಹಾಗೂ 22ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಆಂಜನಪ್ಪ ಅವರನ್ನು ತಾಲೂಕಿನ ನಂದಗುಡಿ ಹೋಬಳಿ ಕಸಾಪ ಅಧ್ಯಕ್ಷ ತರಬಹಳ್ಳಿ ಹರೀಶ್, ಸೂಲಿಬೆಲೆ ಹೋಬಳಿ ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಆರ್. ಉಮೇಶ್, ಕಸಾಪ ನಿಕಟಪೂರ್ವ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೂಲಿಬೆಲೆ ಮಂಜುನಾಥ್, ಕಸಾಪ ಸದಸ್ಯ ಬೆಟ್ಟಹಳ್ಳಿ ಅಂಜಿನಪ್ಪ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಅಭಿನಂದಿಸಿದರು.