ಮುಖ್ಯರಸ್ತೆಯಲ್ಲಿ ಬಾಯ್ತೆರೆದ ಮ್ಯಾನ್‌ಹೋಲ್!ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆಯ ಹಳೇ ಪೊಲೀಸ್ ಠಾಣೆ ಮುಂಭಾಗದಲ್ಲಿ ಮ್ಯಾನ್‌ಹೋಲ್ ಶಿಥಿಲಗೊಂಡಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಈ ಬಗ್ಗೆ ಗಂಭೀರ ನಿರ್ಲಕ್ಷ್ಯ ವಹಿಸಿರುವ ನಗರಸಭೆ ತುರ್ತು ಕ್ರಮ ವಹಿಸುವುದು ಅಗತ್ಯವಾಗಿದೆ.