ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರತಿಷ್ಠಿತ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ಗುರುವಾರ ಬೆಳಿಗ್ಗೆ ತಿಂಡಿಯಲ್ಲಿ ಹುಳ ಪತ್ತೆಯಾಗಿದೆ ಎಂದು ಆರೋಪಿಸಿ ಪ್ರಯಾಣಿಕರೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬಾಲ್ಯ ವಿವಾಹವನ್ನು ಶಿಕ್ಷಾರ್ಹ ಅಪರಾಧ ಎಂದು ತಿಳಿಸಲಾಗಿದೆ. ಬಾಲ್ಯ ವಿವಾಹ ಮಾಡಿದ ವಧು, ವರರ ಕುಟುಂಬದವರು ಶಿಕ್ಷೆಗೆ ಗುರಿಯಾಗುತ್ತಾರೆ. ಇದೀಗ ಅಂತಹ ವಿವಾಹಗಳನ್ನು ನಿಶ್ಚಯ ಮಾಡುವವರನ್ನೂ ಶಿಕ್ಷೆಗೆ ಒಳಪಡಿಸಲು ಅವಕಾಶ ನೀಡಿ ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ-2025 ರೂಪಿಸಲಾಗಿದೆ.
ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಕೇಳಿ ಬಂದಿರುವ ಸ್ಮಾರ್ಟ್ ಮೀಟರ್ ಗುತ್ತಿಗೆಯ ಬಹುಕೋಟಿ ಹಗರಣದ ತನಿಖೆಯು ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಮೇಲೆ ಅವಲಂಬಿತವಾಗಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುರ್ಜೇವಾಲಾ ಅವರೊಂದಿಗೆ ಸಭೆ ನಡೆಸಿ 22 ನಿಗಮಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕ ಪಟ್ಟಿಯನ್ನು ಬಹುತೇಕ ಅಂತಿಮಗೊಳಿಸಿದ್ದಾರೆ. ಈ ಪಟ್ಟಿಗೆ ಈ ಮಾಸಾಂತ್ಯದ ವೇಳೆಗೆ ಹೈಕಮಾಂಡ್ ಮುದ್ರೆ ಬೀಳುವ ಸಾಧ್ಯತೆ
ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಗುರುವಾರ ಕರಡು ನಿಯಮಾವಳಿ ಪ್ರಕಟಿಸಿದ್ದು, ಎಸ್ಸೆಸ್ಸೆಲ್ಸಿ ಪಾಸಾಗಲು ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಎರಡೂ ಸೇರಿ ಶೇ.33 ಅಂಕ ಪಡೆದರೆ ಸಾಕೆಂದು ಹೇಳಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ 6 ಆರೋಪಿಗಳಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ಒಂದೇ ವಾರದಲ್ಲಿ ಎರಡನೇ ಬಾರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್
ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಯಾವುದಾದರೊಂದು ಪ್ರಶಸ್ತಿಯನ್ನು ಇತ್ತೀಚೆಗೆ ಅಗಲಿದ ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಹೆಸರಿನಲ್ಲಿ ನೀಡುವಂತೆ ನಟಿ ತಾರಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಮುಡಾ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಹುಟ್ಟು ಹಾಕಿದ್ದ ಪ್ರಕರಣ. ನಾಲ್ಕು ದಶಕಗಳ ತಮ್ಮ ರಾಜಕೀಯ ಜೀವನದಲ್ಲಿ ಎಂದೂ ಕಳಂಕ ತಗಲಿಸಿಕೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶುಭ್ರ ಬಿಳಿ ಪಂಚೆಗೆ ಕಪ್ಪು ಮೆತ್ತಿಕೊಳ್ಳುವ ಆತಂಕ ಹುಟ್ಟಿಸಿದ್ದ ಪ್ರಕರಣ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025-26ನೇ ಸಾಲಿನ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿನ ವೈದ್ಯಕೀಯ ಪದವಿ ಕೋರ್ಸು ಸೀಟುಗಳ ಶುಲ್ಕದ ವಿವರಗಳನ್ನು ಬುಧವಾರ ಪ್ರಕಟಿಸಿದೆ.