ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಟ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬಿರುಬಿಸಿಲಿನ ನಡುವೆ ಕರಾವಳಿ, ಮಲೆನಾಡು ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆಯಬ್ಬರ ಮುಂದುವರಿದಿದೆ. ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯದಲ್ಲಿ ಬಾಲಕ ಸೇರಿ ರಾಜ್ಯದಲ್ಲಿ ಮತ್ತೆ ನಾಲ್ವರು ಬಲಿಯಾಗಿದ್ದಾರೆ.
ಪುಲಿಕೇಶಿನಗರ ಮಸೀದಿ ರಸ್ತೆಯ ‘ಕರಾಮಾ’ ಎಂಬ ರೆಸ್ಟೋರೆಂಟ್ ಬಳಿ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ಕೆಲ ಕಿಡಿಗೇಡಿಗಳು ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಅವರ ಪತಿಯಾಗಿರುವ ನಟ ಭುವನ್ ಪೊನ್ನಣ್ಣ ಅವರ ಮೇಲೆ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿಯಲು ಪ್ರಯತ್ನಿಸಿರುವ ಘಟನೆ ನಡೆದಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ಬಾರಿ ನಡೆಸಿದ ಸಿಇಟಿ ಪರೀಕ್ಷೆ ತೀವ್ರ ಗೊಂದಲಕ್ಕೆ ಕಾರಣವಾಗಿದ್ದು, ನಾಲ್ಕು ವಿಷಯಗಳಲ್ಲಿ ಒಟ್ಟು 50ಕ್ಕೂ ಹೆಚ್ಚು ಸಿಲೆಬಸ್‌ನಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.