ಗ್ರಾಮಾಭಿವೃದ್ಧಿಗೆ ಗ್ರಾಪಂ ಸದಸ್ಯರ ಕಾಳಜಿ ಅಗತ್ಯದೊಡ್ಡಬಳ್ಳಾಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಗ್ರಾಮ ಪಂಚಾಯತಿಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.