ನೀರಾವರಿ ವಿಚಾರದಲ್ಲಿ ಬಯಲುಸೀಮೆಗೆ ಅನ್ಯಾಯದೊಡ್ಡಬಳ್ಳಾಪುರ: ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಬಯಲು ಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಶಾಸಕ ಧೀರಜ್ ಮುನಿರಾಜು ಅವರಿಗೆ ಮನವಿ ಸಲ್ಲಿಸಲಾಯಿತು.