ಯುವಕನ ಹತ್ಯೆ: ಆರೋಪಿ ನ್ಯಾಯಾಲಯಕ್ಕೆ ಶರಣುದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ರಾಮೇಶ್ವರ ಗ್ರಾಮದ ಸಮೀಪದ ಡಾಬಾದಲ್ಲಿ ಫೋಟೋ ಶೂಟ್ ವಿಚಾರವಾಗಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕಚೇರಿಪಾಳ್ಯ ನಿವಾಸಿ ಸೂರ್ಯ ಹತ್ಯೆ ಪ್ರಕರಣದ ಮೊದಲ ಆರೋಪಿ ದಿಲೀಪ್ ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.