ದೊಡ್ಡಬಳ್ಳಾಪುರ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಶೀಘ್ರ ಅನುದಾನ ದೊಡ್ಡಬಳ್ಳಾಪುರ: ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ರಾಜ್ಯ ಸರ್ಕಾರ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಜನತಾ ದರ್ಶನದಲ್ಲಿ ಸ್ವೀಕರಿಸಿದ ದೂರು, ಅಹವಾಲುಗಳನ್ನು ತಿಂಗಳೊಳಗಾಗಿ ಬಗೆಹರಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.