ಬಿಜೆಪಿಗೆ ಸೇರಿಸಿಕೊಳ್ಳುವಾಗ ಜಾಮೂನು, ಮೈಸೂರು ಪಾಕ್, ಜಿಲೇಬಿ ಕೊಡುತ್ತಾರೆ. ಅದೇ ಅವರ ಕೆಲಸ ಮುಗಿದ ಮೇಲೆ ವಿಷ ಕೊಡುತ್ತಾರೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಘೋಷಿಸಿದರು.
ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 5 ದಿನಗಳ ಕಾಲ ನಡೆದ ‘ನೋ ಮೈ ಇಂಡಿಯ’ ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಬಿಹಾರ ಮತ್ತು ಛತ್ತೀಸ್‌ಘಡದಿಂದ ಆಗಮಿಸಿದ್ದ ಭಯೋತ್ಪಾದನೆಯಿಂದ ಶೋಷಿಸಲ್ಪಟ್ಟ ಕುಟುಂಬಗಳಿಗೆ ಸೇರಿದ 37 ಮಕ್ಕಳು ಪಾಲ್ಗೊಂಡಿದ್ದರು.
ಎಟಿಎಂ ಯಂತ್ರದಿಂದ ಹಣ ವಿತ್‌ಡ್ರಾ ಆಗಿದೆಯೋ, ಇಲ್ಲವೋ ಎಂದು ತಿಳಿಯಲು ಎಟಿಎಂ ಕಿಯೋಸ್ಕ್‌ನಲ್ಲಿರುವ ಸಿಸಿ ಕ್ಯಾಮೆರಾ ವಿಡಿಯೋವನ್ನು ಬ್ಯಾಂಕ್ ಅಧಿಕಾರಿಗಳು ಪರಿಶೀಲಿಸಿದ್ದರೆ ಸಮಸ್ಯೆ ಪರಿಹಾರವಾಗುತ್ತಿತ್ತು ಎಂದು ಬೆಂಗಳೂರು ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹೇಳಿದೆ.
ಪೊಲೀಸ್ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಕಾಣಿಸುವ ನಿಟ್ಟಿನಲ್ಲಿ ತಮ್ಮ ಎರಡು ಸರ್ಕಾರಿ ಕಾರುಗಳಿಗೆ ಕೂಡಾ ಡ್ಯಾಶ್ ಕ್ಯಾಮೆರಾಗಳನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅಳವಡಿಸಿದ್ದಾರೆ.