ಕಾವೇರಿ: ಕೇಂದ್ರ ಸಚಿವ ಶೇಖಾವತ್ಭೇಟಿಯಾದ ಕುರುಬೂರು ನಿಯೋಗಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದ ನಿಯೋಗ ದೆಹಲಿಯಲ್ಲಿ ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿತು. ಬರಗಾಲ ಸಂದರ್ಭದಲ್ಲೂ ತಮಿಳುನಾಡಿಗೆ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಅವೈಜ್ಞಾನಿಕವಾಗಿದ್ದು, ಅದಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿತು.