ಕಾಲುಬಾಯಿ ರೋಗ ತಡೆಗೆ ಮುಂಜಾಗ್ರತಾ ಕ್ರಮ ವಹಿಸಿಹೊಸಕೋಟೆ: ಹಸುಗಳ ಕಾಲು ಬಾಯಿ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಸುಗಳಿಗೆ ಲಸಿಕೆ ಹಾಕಿಸಬೇಕು. ರೋಗಬಂದ ರಾಸುಗಳನ್ನು ಆರೋಗ್ಯಕರ ದನಗಳಿಂದ ಬೇರ್ಪಡಿಸಿ, ಕೂಡಲೇ ಪಶು ವೈದ್ಯರಿಂದ ಚಿಕಿತ್ಸೆ ನೀಡಬೇಕು ಎಂದು ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ ಸಿ.ಎನ್.ನಾರಾಯಣಸ್ವಾಮಿ ತಿಳಿಸಿದರು.