ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಮಂಗಳವಾರದಿಂದ ಮೆಟ್ರೋ ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್) ತಪಾಸಣೆ ಆರಂಭಿಸಿದೆ. ಆಗಸ್ಟ್‌ನಲ್ಲಿ ಸಂಚಾರ ಆರಂಭಿಸುವುದು ಬಹುತೇಕ ನಿಶ್ಚಿತವಾಗಿದೆ
ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ವಿರೋಧಿಸಿ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರ ಬೇಕರಿ ಹಾಗೂ ಕಾಂಡಿಮೆಂಟ್ಸ್ ಸೇರಿದಂತೆ ವಿವಿಧೆಡೆ ಹಾಲು, ಕಾಫಿ-ಚಹಾ ಮತ್ತು ಹಾಲಿನ ಇತರ ಉತ್ಪನ್ನಗಳ ಮಾರಾಟದಲ್ಲಿ ವ್ಯತ್ಯಯ
ಕೇಂದ್ರದ ಆರ್‌ಡಿಎಸ್‌ಎಸ್ (ರಿವ್ಯಾಂಪ್ಡ್ ಡಿಸ್ಟ್ರಿಬ್ಯೂಷನ್ ಸೆಕ್ಟರ್ ಸ್ಕೀಂ) ಅಡಿ ಎಲ್ಲಾ ವಿದ್ಯುತ್ ಸಂಪರ್ಕಗಳಿಗೂ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ಯುಪಿಐ ವಹಿವಾಟಿನ ಮೊತ್ತ ಆಧರಿಸಿ ಕರ್ನಾಟಕದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು, ಸಾವಿರಾರು ಸಣ್ಣ ವರ್ತಕರಿಗೆ ಜಿಎಸ್ಟಿ ನೋಟಿಸ್ ಜಾರಿ ಮಾಡಿರುವ ಹೊತ್ತಿನಲ್ಲೇ ಎಸ್‌ಬಿಐ ರಿಸರ್ಚ್’ ತನ್ನ ವರದಿಯಲ್ಲಿ ಎಚ್ಚರಿಸಿದೆ.
ರಂಭಾಪುರಿ, ಉಜ್ಜಯಿನಿ, ಶ್ರೀಶೈಲ, ಕೇದಾರ ಹಾಗೂ ಕಾಶಿ ಪೀಠದ ಜಗದ್ಗುರುಗಳು ಒಂದೂವರೆ ದಶಕದ ನಂತರ ಒಂದೇ ವೇದಿಕೆಯಲ್ಲಿ ದರ್ಶನ - ಅಮೃತ ಕ್ಷಣಗಳಿಗೆ ರೇಣುಕಾ ಮಂದಿರ, ದಾವಣಗೆರೆ ಮಹಾನಗರ ಸಾಕ್ಷಿ
ರಾಜರಾಜೇಶ್ವರಿ ನಗರದಲ್ಲಿ ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಸಂಭ್ರಮ 2025’ ಅದ್ಧೂರಿಯಾಗಿ ನಡೆಯಿತು. ಈ ಸಂಭ್ರಮದಲ್ಲಿ ಕರಾವಳಿ ಮತ್ತು ಮಲೆನಾಡು ಸಂಸ್ಕೃತಿ ಬಿಂಬಿಸುವ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆಚ್ಚುಗೆಗೆ ಪಾತ್ರವಾದವು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿ 5 ನಗರ ಪಾಲಿಕೆ ರಚನೆ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದರೂ ಸಾರ್ವಜನಿಕರಷ್ಟೇ ಅಲ್ಲದೆ ಜನಪ್ರತಿನಿಧಿಗಳೂ ಸಲ್ಲಿಸಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದಂಡ ಮತ್ತು ಬಡ್ಡಿ ಕಟ್ಟಬೇಕು ಎಂಬ ನೋಟಿಸ್ ನೋಡಿ ನಮಗೆ ರಕ್ತದೊತ್ತಡ (ಬಿ.ಪಿ) ಹೆಚ್ಚಿದ್ದು, ಆತಂಕವಾಗಿದೆ. ನಿತ್ಯದ ದುಡಿಮೆ, ಕೆಲಸ ಕಾರ್ಯಗಳನ್ನು ಬಿಟ್ಟು ಈ ನೋಟಿಸ್‌ಗೆ ಏನು ಮಾಡುವುದು ಎಂಬ ಚಿಂತೆ ಶುರುವಾಗಿದೆ ಎಂದು ಸಣ್ಣ ವ್ಯಾಪಾರಿಗಳು ಅಳಲು ತೋಡಿಕೊಂಡರು.