ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಸಿಎಂ ಭಾಗಿ: ರಾಜೇಂದ್ರದೊಡ್ಡಬಳ್ಳಾಪುರ: ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಅ.19ರಂದು ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.