ನನ್ನ ಜೀವಕ್ಕೆ ಏನಾದರೂ ಅಪಾಯವಾದರೆ ಸಚಿವರು ಮತ್ತು ಸರ್ಕಾರವೇ ಹೊಣೆ ಎಂದು ಶ್ರೀ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೂರ್ಣಾನಂದಪುರಿ ಸ್ವಾಮೀಜಿ ಸ್ಪಷ್ಟಪಡಿಸಿದರು.
‘ಕರ್ನಾಟಕ ಕಿರು ಸಾಲ (ಮೈಕ್ರೋ) ಮತ್ತು ಸಣ್ಣ ಸಾಲ ವಸೂಲಾತಿ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ-2025’ ಮತ್ತು ಇದಕ್ಕೆ ಪೂರಕವಾಗಿರುವ ಮೂರು ವಿಧೇಯಕಗಳನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
ದುಬೈಯಿಂದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ (33) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ.
ಪವರ್ ಸ್ಟಾರ್ ಡಾ.ಪುನೀತ್ ರಾಜ್ಕುಮಾರ್ ಅವರ 50ನೇ ಜನ್ಮ ದಿನ ಹಿನ್ನೆಲೆಯಲ್ಲಿ ಅಂಚೆ ಇಲಾಖೆ ಪುನೀತ್ ರಾಜ್ಕುಮಾರ್ ಅವರ ಐದು ವಿಶೇಷ ‘ಪಿಚ್ಚರ್ ಪೋಸ್ಟ್ ಕಾರ್ಡ್‘ಗಳನ್ನು ಬಿಡುಗಡೆ ಮಾಡಿದೆ.
ಸರ್ಕಾರಿ ಆಸ್ಪತ್ರೆ ವೈದ್ಯ ರು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಹೊರಗೆ ಪ್ರ್ಯಾಕ್ಟೀಸ್ ಮಾಡುವಂತಿಲ್ಲ. ಇದರ ಮೇಲ್ವಿಚಾರಣೆಗಾಗಿ 4 ಬಾರಿ ಬಯೋಮೆಟ್ರಿಕ್ ಹಾಜರಾತಿ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಮಹಾಕುಂಭಮೇಳವನ್ನೇ ಬಂಡವಾಳ ಮಾಡಿಕೊಂಡು ಪ್ಯಾಕೇಜ್ ಟೂರ್ ಹೆಸರಿನಲ್ಲಿ ಜಾಹೀರಾತು ನೀಡಿ ನೂರಕ್ಕೂ ಅಧಿಕ ಮಂದಿಯಿಂದ ಲಕ್ಷಾಂತರ ರುಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.