ವೈಜ್ಞಾನಿಕ ಬೆಲೆ ಇಲ್ಲದೆ ಭೂಮಿ ಕೊಡಲ್ಲದೊಡ್ಡಬಳ್ಳಾಪುರ: ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳಲು ಹೊರಟಿರುವ ರೈತರ ಜಮೀನಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದೆ ಹೋದರೆ ಯಾವುದೇ ಕಾರಣಕ್ಕೂ ನಮ್ಮ ಭೂಮಿ ಬಿಟ್ಟು ಕೊಡುವುದಿಲ್ಲ. 2013 ರ ಭೂಸ್ವಾಧೀನ ಕಾಯ್ದೆಯಂತೆ ಪರಿಹಾರ ಒದಗಿಸಲು ಆಗ್ರಹಿಸಿ ಮಾ.11 ರಂದು ಜಿಲ್ಲಾಧಿಕಾರಿ ಕಚೇರಿವರೆಗೆ ವಾಹನಗಳ ಮೂಲಕ ರ್ಯಾಲಿ ನಡೆಸಲಾಗುವುದು ಎಂದು ಕೊನಘಟ್ಟ, ಕೋಡಿಹಳ್ಳಿ, ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ ಹಾಗೂ ಮೋಪರಹಳ್ಳಿ ರೈತರು ತಿಳಿಸಿದರು.