ರಾಜ್ಯದ ವಿವಿಧೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದ್ದು, ಯಾದಗಿರಿ, ಉತ್ತರ ಕನ್ನಡ, ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಗದಗ ಸೇರಿ 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ, ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂದೋಶ್ ಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿ ಸಂಬಂಧ ತ್ವರಿತವಾಗಿ ಪೊಲೀಸರಿಗೆ ಹೊಸ ವಾಹನಗಳನ್ನು ಬಿಬಿಎಂಪಿ ನೀಡುವುದಾಗಿ ಒಪ್ಪಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
‘ಜನ ಸ್ನೇಹಿ ಆಡಳಿತ’ ಜಾರಿಗೆ ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ-ಮನೆಗೆ ಪೊಲೀಸ್’ ಎಂಬ ಹೆಸರಿನ ವಿನೂತನ ಕಾರ್ಯಕ್ರಮಕ್ಕೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ ಚಾಲನೆ ನೀಡಿದರು.
ನೀರುಗಾಲುವೆಗಳಲ್ಲಿ ಮಾನ್ಯತಾ ಟೆಕ್ ಪಾರ್ಕ್ ಸೇರಿದಂತೆ ವಿವಿಧ ಟೆಕ್ ಪಾರ್ಕ್‌ಗಳು ಕಟ್ಟಡ ನಿರ್ಮಿಸಿ ಮುಚ್ಚಿರುವುದರಿಂದಲೇ ಈ ಭಾಗದಲ್ಲಿ ಮಳೆಯಿಂದ ಪ್ರವಾಹ ಸ್ಥಿತಿ
ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದರೂ ಇವರಲ್ಲಿ ಅನೇಕರು ಜಿಎಸ್‌ಟಿ ನೋಂದಣಿ ಮಾಡಿಕೊಳ್ಳದೆ ‘ಯುಪಿಐ’ ಮೂಲಕವೇ ಮಿತಿ ಮೀರಿ ಲಕ್ಷಾಂತರ ರು. ಸ್ವೀಕರಿಸಿರುವುದು ಪರಿಶೀಲನೆ ವೇಳೆ ಕಂಡು ಬಂದಿದೆ.