ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರ ಶುಕ್ರವಾರ ಮತದಾನ ನಡೆಯಲಿದೆ. ವಾರಾಂತ್ಯ ಆಗಿರುವುದರಿಂದ ಬಹುತೇಕರು ಮತದಾನ ಮಾಡದೆ ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
‘ಇಂಡಿಯಾ’ ಮೈತ್ರಿಕೂಟ ಜಯಗಳಿಸಿದರೆ ಕರ್ನಾಟಕದಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ತಮಿಳುನಾಡಿನ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಬೇಕು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.