ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ದುಷ್ಪರಿಣಾಮಗಳ ಜನಜಾಗೃತಿದೊಡ್ಡಬಳ್ಳಾಪುರ: ನಗರದ ಹಸಿ ತ್ಯಾಜ್ಯ ನಿರ್ವಹಣೆ ಮತ್ತು ವ್ಯವಸಾಯದಲ್ಲಿ ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಗರಸಭೆ ಮತ್ತು ರೈತರ ಸಹಭಾಗಿತ್ವದಲ್ಲಿ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ರಮ ರೂಪಿಸಲಾಗಿದ್ದು, ರೈತರ ಜಾಗದಲ್ಲಿಯೇ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಕ್ರಮಗಳನ್ನು ಕೈಗೊಂಡಿದೆ ಎಂದು ನಗರಸಭೆ ಪೌರಾಯುಕ್ತ ಆರ್.ಕಾರ್ತಿಕೇಶ್ವರ ತಿಳಿಸಿದರು.