ಭೂಸ್ವಾಧೀನ: ವೈಜ್ಞಾನಿಕ ಬೆಲೆಗೆ ರೈತರ ಹಕ್ಕೊತ್ತಾಯದೊಡ್ಡಬಳ್ಳಾಪುರ: ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳಾದ ಆಗಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ, ಕೊನಘಟ್ಟ ಹಾಗೂ ಕೋಡಿಹಳ್ಳಿಗೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಬುಧವಾರ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಬಿಡದಿ ಬಳಿಯ ಕ್ಯಾತಗಾನಹಳ್ಳಿ ತೋಟದ ಮನೆಯಲ್ಲಿ ಭೇಟಿ ಮಾಡಿ ಹೋರಾಟ ಬೆಂಬಲಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಪತ್ರ ಸಲ್ಲಿಸಿದರು.