ಕರ್ನಾಟಕದ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದ್ದು, ವಿಶ್ವದಲ್ಲಿ ಪರಿಣಿತ ಟೆಕ್ಕಿಗಳನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ ಅಗ್ರ 10 ರಲ್ಲಿ ಸ್ಥಾನ ಪಡೆದಿದೆ. ಭಾರತದ ಒಟ್ಟು 6 ನಗರಗಳು ಈ ಪಟ್ಟಿಯಲ್ಲಿರುವುದು ವಿಶೇಷ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದ (ಕೆಎಸ್ಆರ್ ಮೆಜೆಸ್ಟಿಕ್) ಯಾರ್ಡ್‌ನಲ್ಲಿ ಮೂಲಸೌಕರ್ಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರಿಂದ 2026ರ ಜನವರಿ 15ರವರೆಗೆ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ದೇವಸ್ಥಾನದ ಟ್ರಸ್ಟ್‌ನ ಹಣಕಾಸಿನ ಅವ್ಯವಹಾರ, ಅವ್ಯವಸ್ಥೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರದ ವಶಕ್ಕೆ ಪಡೆದು ‘ಘೋಷಿತ ಸಂಸ್ಥೆ’ ಎಂದು ಆದೇಶಿಸಲಾಗಿದೆ.
‘ . ನಾಯಕತ್ವಕ್ಕಾಗಿ ಡಿಕೆಶಿ ಹಾಗೂ ನನ್ನ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ. ನಾನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೇಳಿದ್ದು, ಭಾರಿ ಸಂಚಲನಕ್ಕೆ ಕಾರಣವಾಗಿದೆ.