ಕಾಶ್ಮೀರದ ಪಹಲ್ಗಾಮ್ ದಾಳಿ ವೇಳೆ ಉಗ್ರರು ನನ್ನ ಅಳಿಯ ಭರತ್ ಭೂಷಣ್ನನ್ನು ’ನೀನು ಹಿಂದುನಾ, ಮುಸ್ಲಿಮಾ’ ಎಂದು ಕೇಳಿದ್ದಾರೆ. ಹಿಂದೂ ಎನ್ನುತ್ತಿದ್ದಂತೆ ಆತನ ತಲೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಭರತ್ ಭೂಷಣ್ರ ಅತ್ತೆ ವಿಮಲಾ ಕಣ್ಣೀರಿಡುತ್ತಾ ಮಾಹಿತಿ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿ ಐತಿಹಾಸಿಕ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದ್ದು, ಚಾಮರಾಜನಗರ ಸೇರಿ ಸುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ 25ಕ್ಕೂ ಹೆಚ್ಚು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಗಳಿವೆ.
ರಾಜ್ಯ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.