ಉಗ್ರರ ಜೈಲು ಜಾಲಕ್ಕೆ ಶಾಕ್ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ, ನೆರವು ನೀಡಿದ ಆರೋಪದಡಿ ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಐದು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಸೇರಿ ಮೂವರನ್ನು ಬಂಧಿಸಿದ್ದಾರೆ.