ಬೆಂಗಳೂರು ಹೊರವತಲಯದಲ್ಲಿ ನಿರ್ಮಿಸಲಾಗುವ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು ಎಕಾನಾಮಿಕ್ ಕಾರಿಡಾರನ್ನಾಗಿ ಪರಿವರ್ತಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.
ದೇಶದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನಸೆಳೆಯಲು ‘ಒಂದು ಗ್ರಾಮ, ಒಂದು ಟ್ರ್ಯಾಕ್ಟರ್’ ಪರಿಕಲ್ಪನೆಯಲ್ಲಿ ಫೆ.16ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುವುದು.
ವ್ಯಾಪಾರ, ವಾಣಿಜ್ಯೋದ್ಯಮಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ ಹಾಗೂ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಇರಬೇಕೆಂಬ ಉದ್ದೇಶದಿಂದ ರೂಪಿಸಿರುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2024’ಅನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿತು.