ರಾಜ್ಯದಲ್ಲಿ ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಒತ್ತಾಯದೊಡ್ಡಬಳ್ಳಾಪುರ: ಸಾರ್ವಜನಿಕರಲ್ಲಿನ ಮೌಡ್ಯತೆಯನ್ನು ನಿವಾರಿಸಿ ವೈಜ್ಞಾನಿಕ ಮನೋಭಾವ ಬೆಳೆಸಲು ಕರ್ನಾಟಕ ಸರ್ಕಾರದ ವತಿಯಿಂದ ಮೌಡ್ಯ ಮುಕ್ತ "ವೈಜ್ಞಾನಿಕ ಅಕಾಡೆಮಿ " ಸ್ಥಾಪಿಸಲು ವಿಧಾನ ಸಭೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.