ಅನ್ನಭಾಗ್ಯ ಬಾಕಿ ಸೇರಿ ಈ ತಿಂಗಳು 15 ಕೆಜಿ ಅಕ್ಕಿದೊಡ್ಡಬಳ್ಳಾಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ ಯೋಜನೆಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಸ್ಥಳದಲ್ಲಿಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.