ಮಾನವ ಧರ್ಮದ ನೆಲೆಯಲ್ಲಿ ಬದುಕಬೇಕು: ಡಿಸಿಎಂದಾಬಸ್ಪೇಟೆ: ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆಯೂ ಅಷ್ಟೇ ಮುಖ್ಯ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೆ, ಪೂಜೆ ಯಾವುದಾದರೂ ಭಕ್ತಿ ಒಂದೆ. ಹಾಗಾಗಿ ನಾವು ಜಾತಿ, ಮತ, ಪಂಥ ಮರೆತು ಮಾನವ ಧರ್ಮದ ನೆಲೆಯಲ್ಲಿ ಮನುಷ್ಯರಾಗಿ ಬದುಕಬೇಕು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು