ತುಂಗಭದ್ರಾ ಅಣೆಕಟ್ಟಿಗೆ ನವಲಿಯಲ್ಲಿ ಸಮಾನಾಂತರ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರಲು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಮಾರ್ಚ್ನಲ್ಲಿ ಸಭೆ ನಡೆಸಲಾಗುವುದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಭಾರೀ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ಇದೀಗ ಕರಾವಳಿ ಪ್ರದೇಶಗಳಲ್ಲಿ ಫೆ.26 ಮತ್ತು 27ರಂದು ಉಷ್ಣ ಅಲೆ (ಹೀಟ್ ವೇವ್) ಎಚ್ಚರಿಕೆ ಘೋಷಿಸಲಾಗಿದೆ.
ರೈತರ ತೀವ್ರ ವಿರೋಧದ ಮಧ್ಯೆಯೂ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ತೆಲಂಗಾಣ ರಾಜ್ಯಕ್ಕೆ 1.27 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಈಶ ಯೋಗ ಕೇಂದ್ರದಲ್ಲಿ ಸಂಸ್ಥಾಪಕ ಸದ್ಗುರು ನೇತೃತ್ವದಲ್ಲಿ ಬುಧವಾರ ಶಿವರಾತ್ರಿ ಉತ್ಸವ ಸಂಭ್ರಮದಿಂದ ನಡೆಯಿತು.
ಉತ್ತರ ಪ್ರದೇಶದಲ್ಲಿನ ಶೇ.12 ರಷ್ಟು ರೋಗಗಳಿಗೆ ಗಂಗಾನದಿಯ ಕಲುಷಿತ ನೀರು ಮೂಲ ಕಾರಣ ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಉತ್ತರ ಪ್ರದೇಶದ ಸಂಸ್ಥೆಗಳೇ ಹೇಳಿವೆ.
ಸಾವಿರ ವರ್ಷದ ಇತಿಹಾಸವಿರುವ ಗುಜರಾತ್ನ ಸೋಮನಾಥ ಜ್ಯೋತಿರ್ಲಿಂಗವನ್ನು ಮಹಾ ಶಿವರಾತ್ರಿ ಅಂಗವಾಗಿ ದೇಶ-ವಿದೇಶಗಳ ಭಕ್ತರು ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ನಲ್ಲಿ ಬುಧವಾರ ರಾತ್ರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಣ್ತುಂಬಿಕೊಂಡಿದ್ದು ವಿಶೇಷವಾಗಿತ್ತು.
ನಮ್ಮ ಊರಿನ ಹೆಸರನ್ನು ನಾವು ಹೇಗೆ ಇಟ್ಟುಕೊಳ್ಳಬೇಕು ಎಂಬುದು ನನಗೆ ಗೊತ್ತಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತಿಗೆ ಕಿಮ್ಮತ್ತು ನೀಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು ಇಂದು, ನಾಳೆ ಎಂಬ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.
ಆಸ್ತಿ ತೆರಿಗೆ ಬಾಕಿದಾರರಿಗೆ ಬಡ್ಡಿ ಹಾಗೂ ದಂಡ ಮನ್ನಾ ಮಾಡುವ ಒನ್ ಟೈಮ್ ಸೆಟಲ್ಮೆಂಟ್ (ಒಟಿಎಸ್) ಯೋಜನೆ ಜಾರಿಗೆ ತಂದರೂ ನಿಗದಿತ ₹5,210 ಕೋಟಿ ತಲುಪಲು ಸಾಧ್ಯವಾಗದ ಬಿಬಿಎಂಪಿ ಇದೀಗ ಮುಂದಿನ ಆರ್ಥಿಕ ವರ್ಷದಲ್ಲಿ ₹5,600 ಕೋಟಿ ಆಸ್ತಿ ತೆರಿಗೆ ವಸೂಲಿಗೆ ನಿರ್ಧರಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮದ ಮೂರನೇ ಹಂತದ ಮೆಟ್ರೋ ಯೋಜನೆಗೆ ಹೆಬ್ಬಾಳದಲ್ಲಿನ 45 ಎಕರೆ ಜಮೀನು ಹಸ್ತಾಂತರ ವಿಚಾರದಲ್ಲಿ ಉಂಟಾಗಿರುವ ಕಗ್ಗಂಟು ನಿವಾರಣೆಗೆ ಫೆ. 28ರಂದು ಬೆಂಗಳೂರು ನಗರಾಭಿವೃದ್ಧಿ ಇಲಾಖೆ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಭೆ ನಡೆಯಲಿದೆ.