ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ಸಿಎಸ್ಟಿ/ಟಿಎಸ್‌ಪಿ ಅಡಿ ನೀಡಲಾಗಿರುವ ₹42 ಸಾವಿರ ಕೋಟಿ ಅನುದಾನ ಪೈಕಿ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ₹13.43 ಸಾವಿರ ಕೋಟಿ ಹಂಚಿಕೆ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಜಾರಿ ಆದೇಶ ಹೊರಡಿಸುತ್ತಿದ್ದಂತೆಯೇ ಈ ಹೊಸ ಮೀಸಲು ನೀತಿಯಂತೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ನೇಮಕಾತಿ ವೇಳೆ ಒಂದು ಬಾರಿಗೆ ಅನ್ವಯವಾಗುವಂತೆ ವಯೋಮಿತಿ ಸಡಿಲಗೊಳಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಉಭಯ ಸದನದಲ್ಲಿ ಪ್ರಕಟಿಸಿದ್ದಾರೆ.
ಕಳೆದ 10 ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ದೇವಲಾಪುರ ರೈಲ್ವೆ ಮೇಲ್ಸೇತುವೆ ಇನ್ನು 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನೆಲಮಂಗಲ ತಾಲೂಕಿನಲ್ಲೆಡೆ ಕಳೆದ ಹದಿನೈದು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಪ್ರತಿನಿತ್ಯ ಮುಂಜಾನೆಯಿಂದಲೇ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ.
ಧರ್ಮಸ್ಥಳ ಗ್ರಾಮ ಪ್ರಕರಣ ಕುರಿತು ಮುಸುಕುಧಾರಿ ವ್ಯಕ್ತಿ ಕಿಂದರಿಜೋಗಿಯಾಗಿ ಎಸ್‌ಐಟಿ ಇಲಿಯಂತಾಗಬಾರದು ಎಂದು ಬಿಜೆಪಿ ಸದಸ್ಯ ಎಸ್.ಸುರೇಶ್‌ಕುಮಾರ್ ತೀಕ್ಷ್ಣವಾಗಿ ಹೇಳಿದ್ದಾರೆ.
ಕೆಎಂಎಫ್ ಹಾಲು ಒಕ್ಕೂಟಗಳ ಪೈಕಿ ಉತ್ತರ ಕರ್ನಾಟಕ ಭಾಗದ ಒಕ್ಕೂಟಗಳಲ್ಲಿ ರೈತರಿಗೆ ಪಾವತಿಸುವ ಹಾಲು ಖರೀದಿ ದರ ಅತ್ಯಂತ ಕಡಿಮೆ ಇರುವ ಬಗ್ಗೆ ತೀವ್ರ ಅಸಮಾಧಾನ
ರಾಜ್ಯದಲ್ಲಿ ಬಾಲ್ಯವಿವಾಹವನ್ನು ಸಂಪೂರ್ಣ ನಿಷೇಧಿಸುವ ಉದ್ದೇಶದೊಂದಿಗೆ ಮತ್ತಷ್ಟು ಕಠಿಣ ನಿಯಮಗಳನ್ನೊಳಗೊಂಡ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಸೋಮವಾರ ಅಂಗೀಕರಿಸಲಾಯಿತು.