ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿ ಸಲ್ಲಿಸುವ ಕಾಲಾವಧಿಯನ್ನು ಹೆಚ್ಚುವರಿಯಾಗಿ ಒಂದು ತಿಂಗಳು ವಿಸ್ತರಿಸಲಾಗಿದೆ.
ಏಷ್ಯಾನೆಟ್ ಸುವರ್ಣ ನ್ಯೂಸ್ ಹಿರಿಯ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಿಸಲಾಗಿದೆ
ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ರಾಜ್ಯ ಸರ್ಕಾರ ಕಲಾವಿದರ ಬಹು ವರ್ಷಗಳ ಬೇಡಿಕೆ ಈಡೇರಿಸಿದ್ದು ಹಿರಿಯ ಕಲಾವಿದರ ಮಾಸಾಶನವನ್ನು 2500 ರು.ಗಳಿಗೆ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದೆ.
ಮನೆಗೆ ಹೋಗಲು ರಿಕ್ಷಾದವರು ಒಪ್ಪದೆ ಅವಮಾನ ಅನುಭವಿಸಿದ್ದ ಮಂಗಳಮುಖಿಯೊಬ್ಬರು ಅದನ್ನೇ ತಮ್ಮ ಯಶಸ್ಸಿನ ಏಣಿಯನ್ನಾಗಿ ಮಾಡಿಕೊಂಡು ನಾಲ್ಕು ರಿಕ್ಷಾ ಖರೀದಿಸಿ, ಬಾಡಿಗೆ ನೀಡಿ, ತಮ್ಮ ಜೀವನೋಪಾಯದೊಂದಿಗೆ ಸಮಾಜಕ್ಕೂ ಮಾದರಿಯಾಗಿದ್ದಾರೆ.
ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ ಮೇಲೆ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಪಡಿಸಿರುವ ಸರ್ಕಾರದ ಕ್ರಮವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ (ಸಿಎಟಿ) ತೀವ್ರವಾಗಿ ಆಕ್ಷೇಪಿಸಿ, ಅಸಮಾಧಾನ ವ್ಯಕ್ತಪಡಿಸಿದೆ.
ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ ಕನಿಷ್ಠ ಶುಲ್ಕದ ಮೇಲೆ ಶೇ.5 ತೆರಿಗೆ ವಿಧಿಸಲು ಕರ್ನಾಟಕ ವಿದ್ಯುತ್ (ಬಳಕೆ ಮೇಲಿನ ತೆರಿಗೆ) ಕಾಯ್ದೆಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿ ನಿಯಮವನ್ನು ಅಸಾಂವಿಧಾನಿಕ ಎಂದು ಹೈಕೋರ್ಟ್ ಘೋಷಿಸಿದೆ.
ರಾಜ್ಯ ಸರ್ಕಾರವು ಮಾರುಕಟ್ಟೆ ಮಧ್ಯಪ್ರವೇಶ ದರದಂತೆ ಪ್ರತಿ ಕ್ವಿಂಟಲ್ ಮಾವಿಗೆ 1,616 ರು. ನಿಗದಿ ಪಡಿಸಲಾಗಿದ್ದು, ಮುಂದಿನ ಒಂದು ತಿಂಗಳವರೆಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಜಾರಿಯಲ್ಲಿರಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಸೇರಿದ ನಗರದ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿದರು.
ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಸಮಿತಿ ರಚಿಸಿ, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.