ಫೆಬ್ರವರಿ-ಮಾರ್ಚ್ನಲ್ಲಿ ಬಿಸಿಲ ತಾಪ ಹೆಚ್ಚಾಗಲಿದ್ದು, ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಬಿಸಿಲು ಅಧಿಕವಾಗಿರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
ಬಿಬಿಎಂಪಿಯು ಆಯೋಜಿಸಿದ್ದ ನಮ್ಮ ರಸ್ತೆ ಕಾರ್ಯಾಗಾರದಲ್ಲಿ ಕನ್ನಡ ಭಾಷೆ ಕಡೆಗಣಿಸಿ ಇಂಗ್ಲಿಷ್ಗೆ ಪ್ರಾಧ್ಯಾನತೆ ನೀಡುವ ಜತೆಗೆ ಅಲ್ಲಲ್ಲಿ ಬಳಕೆ ಮಾಡಿದ ದೋಷ ಪೂರಿತ ಕನ್ನಡದ ಸಾಲುಗಳು ಕನ್ನಡಾಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮುಂದಿನ ಮಾ.21ರಿಂದ ಏ.4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಇದು ದಾಖಲೆ ಎಂದು ಶಾಲಾ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಫೇಮ್ ಇಂಡಿಯಾ ಯೋಜನೆ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಮತ್ತಷ್ಟು ಎಲೆಕ್ಟ್ರಿಕ್ ಬಸ್ಗಳನ್ನು ನೀಡಲು ಒಪ್ಪಿಗೆ ಸೂಚಿಸಿದ್ದು, ಶೀಘ್ರ ಬಿಎಂಟಿಸಿ ಹೊರತುಪಡಿಸಿ ಉಳಿದ ಮೂರು ನಿಗಮಗಳಿಗೆ 750 ಎಲೆಕ್ಟ್ರಿಕ್ ಬಸ್ಗಳು ಸೇರ್ಪಡೆಗೊಳ್ಳಲಿವೆ.
ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ₹3,011 ಕೋಟಿ ಟಿಡಿಆರ್ ಪರಿಹಾರ ನೀಡುವುದರಿಂದ ಪಾರಾಗಲು ಸುಪ್ರೀಂ ಕೋರ್ಟ್ ಹಿರಿಯ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.