ಗೋದಾವರಿ, ಕೃಷ್ಣ ಮತ್ತು ಕಾವೇರಿ ನದಿಗಳ ಜೋಡಣೆ ಅಗತ್ಯವಾಗಿದ್ದು, ನೀರಾವರಿ ಯೋಜನೆಯಲ್ಲಿ ರಾಜ್ಯಕ್ಕೆ 25 ಟಿಎಂಸಿ ನೀರು ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದು, ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ನೀಡಿದರೆ ಮಂತ್ರಿಗಿರಿ ಬಿಡುತ್ತೇನೆ. ಇದನ್ನು ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಜಲಜೀವನ್ ಮಿಷನ್ ಯೋಜನೆಗೆ ಬಜೆಟ್‌ನಲ್ಲಿ ಕಡಿಮೆ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರ ಯೋಜನೆಯನ್ನು ಕೊಲ್ಲುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿದ್ದ ಬುಡಕಟ್ಟು ಸಮುದಾಯದವರಿಗೆ ಪುನರ್ವಸತಿ ಕಲ್ಪಿಸಲು ನಿಗದಿ ಮಾಡಲಾಗಿರುವ ಭೂಮಿಯಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗುವ ಜತೆಗೆ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗುವ ಆತಂಕ ಎದುರಾಗಿದೆ.
ಹಾಡುಹಗಲೇ ಎಟಿಎಂಗೆ ಹಣ ತುಂಬಿಸುವ ವಾಹನದಿಂದ ಹಣ ದರೋಡೆ ಹಾಗೂ ಕೊಲೆ ಪ್ರಕರಣ ಎಸಗಿದ ಖದೀಮರ ಸುಳಿವು ಕೊಟ್ಟವರಿಗೆ ರಾಜ್ಯ ಪೊಲೀಸ್ ಇಲಾಖೆ ₹5 ಲಕ್ಷ ಬಹುಮಾನ ಘೋಷಿಸಿದೆ.
ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಮುಂದಾದ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಿ.ಎಸ್.ಬಸವೇಶ್‌ಗೆ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.
ಕೇಂದ್ರ ಸರ್ಕಾರವು ಕರ್ನಾಟಕ ರೈಲ್ವೆಗೆ ಹೆಚ್ಚಿನ ಅನುದಾನ ನೀಡಿದೆ. ಯುಪಿಎ ಅವಧಿಗಿಂತ ಒಂಬತ್ತು ಪಟ್ಟು ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ಚಿನಿ ವೈಷ್ಣವ್ ಹೇಳಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜಪ್ತಿ ಮಾಡಲಾದ ಕೋಟ್ಯಂತರ ರುಪಾಯಿ ಮೌಲ್ಯದ ಚಿನ್ನಾಭರಣಗಳು ಸೇರಿ ಇನ್ನಿತರ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ವಿಶೇಷ ನ್ಯಾಯಾಲಯ ಪೂರ್ಣಗೊಳಿಸಿದೆ.
‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.