ದೇಶದ ಇತರೆ ಮೆಟ್ರೋ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯ, ರಿಯಾಯಿತಿ ನೀಡಲಾಗಿದೆ. ಆದರೆ ಇಡೀ ದೇಶದಲ್ಲಿ ಅತ್ಯಂತ ದುಬಾರಿ ಟಿಕೆಟ್ ದರ ವಿಧಿಸುವ ‘ನಮ್ಮ ಮೆಟ್ರೋ’ದಲ್ಲಿ ಮಾತ್ರ ಯಾವುದೇ ಸೌಲಭ್ಯ ಇಲ್ಲ. ಹಾಗಾಗಿ ಬಿಎಂಆರ್‌ಸಿಎಲ್ ಸಹ ಪ್ರಯಾಣಿಕರಿಗೆ ಸೌಲಭ್ಯ ಒದಗಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ.
‘ಮುಂದಿನ ಚುನಾವಣೆ ಗೆಲ್ಲಬೇಕು ಎಂದರೆ ನಮಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಬೇಕೇ ಬೇಕು. ಮತ್ತೊಂದು ಅವಧಿವರೆಗೂ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಮುಂದಿನ ನಾಯಕತ್ವ ಬೆಳೆಸುವವರೆಗೆ ಇರಬೇಕು’ ಎಂದು ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಡಾ.ಎಚ್.ಸಿ. ಮಹದೇವಪ್ಪ ಅಭಿಪ್ರಾಯ ಪಟ್ಟಿದ್ದಾರೆ
ಕಾಂಗ್ರೆಸ್ ಆಂತರಿಕ ರಾಜಕಾರಣ ಇದೀಗ, ಮುಂದಿನ ಚುನಾವಣೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಇರಬೇಕು ಎಂಬಲ್ಲಿಗೆ ಬಂದು ನಿಂತಿದ್ದು, ತನ್ಮೂಲಕ ನವೆಂಬರ್ ಅಥವಾ ಅಕ್ಟೋಬರ್ ಕ್ರಾಂತಿಗೆ ಪೂರ್ವ ಕಿಡಿಗಳು ರಾಜ್ಯ ರಾಜಕಾರಣದ ಅಂಕಣದಲ್ಲಿ ಭರ್ಜರಿಯಾಗಿ ಸಿಡಿಯತೊಡಗಿವೆ.
ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟದಂತಹ ದಾಂಧಲೆಗೆ ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಬುಲ್ಡೋಜರ್ ಹತ್ತಿಸುವ ಕ್ರಮ ಇದೆ. ಕರ್ನಾಟಕದಲ್ಲೂ ಆ ಪರಿಸ್ಥಿತಿ ಬಂದರೆ ನೋಡೋಣ. ಈಗ ಅಂತಹ ಪರಿಸ್ಥಿತಿ ಕರ್ನಾಟಕದಲ್ಲಿ ಇಲ್ಲ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಹೇಳಿದರು.
ಆರೂವರೆ ದಶಕಗಳಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆ-1961ರ ಬದಲಿಗೆ ಆದಾಯ ತೆರಿಗೆ ಕಾನೂನಿಗೆ ಸರಳತೆ, ಸ್ಪಷ್ಟತೆ ಹಾಗೂ ಪಾರದರ್ಶಕತೆ ತರುವುದರ ಜತೆಗೆ ಜನಸಾಮಾನ್ಯರಿಗೂ ಅರ್ಥವಾಗುವಂತೆ ಸರಳ ಭಾಷೆಯಲ್ಲಿ ಒದಗಿಸಲು ಕೇಂದ್ರ ಸರ್ಕಾರವು ‘ಆದಾಯ ತೆರಿಗೆ ಮಸೂದೆ-2025’ ಮಂಡಿಸಿದೆ.
ಕರ್ನಾಟಕವು ನೆರೆಹೊರೆಯ ರಾಜ್ಯಗಳೊಂದಿಗೆ ಸ್ಪರ್ಧಿಸುತ್ತಿಲ್ಲ. ಬದಲಿಗೆ ವಿಶ್ವಮಟ್ಟದಲ್ಲಿ ಸ್ಪರ್ಧೆ ನಡೆಸುತ್ತಿದೆ. ಅದಕ್ಕೆ ಪೂರಕವಾಗಿ ಇನ್ವೆಸ್ಟ್ ಕರ್ನಾಟಕ ಯಶಸ್ವಿಯಾಗಿದ್ದು, ರಾಜ್ಯದ ಆರ್ಥಿಕ ಪ್ರಗತಿ ಮತ್ತಷ್ಟು ಹೆಚ್ಚಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಭಾರತದ ಯುವಜನರನ್ನು ಸಬಲೀಕರಣಗೊಳಿಸಿ ನಿರುದ್ಯೋಗ ಸಮಸ್ಯೆ ನಿವಾರಿಸಲು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಿದೆ ಎಂದು ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಶಶಿ ತರೂರ್ ಹೇಳಿದರು.
ದೇವನಹಳ್ಳಿ, ದೊಡ್ಡಬಳ್ಳಾಪುರ, ಹೀಳಲಿಗೆ ಸೇರಿದಂತೆ ಇನ್ನಿತರ ಪ್ರದೇಶವನ್ನು ಸಂಪರ್ಕಿಸುವ 287 ಕಿ.ಮೀ ಉದ್ದದ ವರ್ತುಲ ರೈಲು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.
ಎಚ್‌ಎಎಲ್‌ನ ತರಬೇತಿ ನೋಡಲ್ ಏಜೆನ್ಸಿಯಾಗಿರುವ ಎಚ್‌ಎಎಲ್ ಮ್ಯಾನೇಜ್‌ಮೆಂಟ್ ಅಕಾಡೆಮಿ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ-ಧಾರವಾಡ (ಐಐಐಟಿ) ಜಂಟಿಯಾಗಿ ಸುಧಾರಿತ ತಂತ್ರಜ್ಞಾನಗಳ ಮೇಲೆ ಕಾರ್ಯ ನಿರ್ವಹಿಸಲು ಜಂಟಿ ಸಹಭಾಗಿತ್ವ ಒಪ್ಪಂದ ಮಾಡಿಕೊಂಡಿವೆ.