ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿ ದುರಂತ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿ ಪೊಲೀಸರ ಅಮಾನತು ನಿರ್ಧಾರ ಖಂಡಿಸಿ ಇಂಡಿಯನ್ ಪೊಲೀಸ್ ಫೌಂಡೇಷನ್(ಐಪಿಎಫ್)ನ 30 ನಿವೃತ್ತ ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕೆಲ ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಸೋಮವಾರದಿಂದ ರಾಜ್ಯಾದ್ಯಂತ ಆರಂಭವಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ ಸಂಬಂಧ ಬಂಧಿತ ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಸೇರಿ ನಾಲ್ವರು ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಮಂಗಳವಾರ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.
ರಾಜ್ಯದ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೃಗಶಿರಾ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿವಿಧೆಡೆ ಮಳೆಗೆ ಮನೆಗಳು ಕುಸಿದಿವೆ.
ರಾಜ್ಯದಲ್ಲಿರುವ ಎಲ್ಲಾ ವಿದ್ಯುತ್ ಸಂಪರ್ಕಗಳಿಗೂ ಕಡ್ಡಾಯವಾಗಿ ಸ್ಮಾರ್ಟ್ ಮೀಟರ್ ಅಳವಡಿಸಲು ಇಂಧನ ಇಲಾಖೆ ಮುಂದಾಗಿದೆ.
ರೈತರಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.11ರಂದು ಗೌರಿಬಿದನೂರಿನಲ್ಲಿ ಅಧಿಕೃತ ಚಾಲನೆ
ವೈದ್ಯಕೀಯ ಶಿಕ್ಷಣ ಇಲಾಖೆಯು ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ (ಕೆಎಂಐಒ) ದೇಶದಲ್ಲೇ ಮೊದಲ ಬಾರಿಗೆ ಪ್ರೋಟಾನ್ ಚಿಕಿತ್ಸಾ ಸೌಲಭ್ಯವನ್ನು ಸ್ಥಾಪಿಸಲು ಮುಂದಾಗಿದ್ದು, ಈ ಸಂಬಂಧ ಕೇಂದ್ರದಿಂದ ₹ 500 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದೆ.
ಆಧಾರ್ ಸೀಡಿಂಗ್ ಮತ್ತು ಇ-ಕೆವೈಸಿಯನ್ನು ಜೂ.30ರೊಳಗೆ ಶೇ.100ರಷ್ಟು ಪೂರ್ಣಗೊಳಿಸಿ, ಅನರ್ಹ ಪಡಿತರ ಫಲಾನುಭವಿಗಳನ್ನು ಗುರುತಿಸಿ ಅಂಥವರಿಗೆ ಹಂಚಿಕೆಯಾಗಿರುವ ಆಹಾರ ಧಾನ್ಯವನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶಿಸಿದೆ.
ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ (ಓಸಿ) ಕಡ್ಡಾಯದಿಂದ ಸುಮಾರು 2 ಲಕ್ಷ ಮನೆ, ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಮಸ್ಯೆಯಾಗಿದೆ. ಹೀಗಾಗಿ ನಿಯಮಗಳಿಗೆ ತಿದ್ದುಪಡಿ ತಂದು ಬಡವರಿಗೆ ವಿದ್ಯುತ್ ಸಂಪರ್ಕ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ವೃಷಭಾವತಿ ಏತ ನೀರಾವರಿ ಯೋಜನೆಗೆ ವಿರೋಧ ಪಕ್ಷದವರು ವಿರೋಧಿಸುತ್ತಿದ್ದಾರೆ, ಸ್ವಚ್ಛವಲ್ಲದ ನೀರು ಬಂದರೆ ನಾನೆ ಖುದ್ದು ವಾಪಸ್ ಕಳುಹಿಸುತ್ತೇನೆ. ಶುದ್ಧ ಹಾಗೂ ಶಾಶ್ವತ ನೀರಾವರಿ ಯೋಜನೆ ನನ್ನ ಸಂಕಲ್ಪವಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.