ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳೆಗೇರಿ ಪ್ರದೇಶಗಳಿದ್ದು, ಅವುಗಳ ಅಭಿವೃದ್ಧಿ ಆಗಬೇಕೆಂದು ಪ್ರಸ್ತಾಪಿಸಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ವರ್ಷದ ‘ಗೌರವ ಪ್ರಶಸ್ತಿ’ ಮತ್ತು ವರ್ಷದ ’ಸಾಹಿತ್ಯಶ್ರೀ’ ಪ್ರಶಸ್ತಿ ಪ್ರಕಟಿಸಿದ್ದು, ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್ ಸೇರಿ ಐವರು ವರ್ಷದ ಗೌರವ ಪ್ರಶಸ್ತಿಗೆ ಆಯ್ಕೆ
ಕೆರೆಗಳ ಸಂರಕ್ಷಣೆ ಸರ್ಕಾರ ಹಾಗೂ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಹಾಗಾಗಿ ರಾಜ್ಯದಲ್ಲಿ ಕೆರೆಗಳ ಜಾಗ ಒತ್ತುವರಿ ಮಾಡಿಕೊಂಡಿರುವವರು ತಾವಾಗಿಯೇ ಆ ಜಾಗ ಬಿಟ್ಟುಕೊಟ್ಟರೆ ಒಳಿತು. ತಪ್ಪಿದರೆ ಅಧಿಕಾರಿಗಳು ಮುಲಾಜಿಲ್ಲದೆ ಅಂಥ ಒತ್ತುವರಿ ತೆರವು ಮಾಡಬೇಕು
ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು– ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ ಹಾಗೂ ಪ್ರಚೋದನಕಾರಿ ಬರಹ ಪ್ರಕಟಿಸಿದ ಸಂಬಂಧ 37 ಪ್ರಕರಣಗಳನ್ನು ದಾಖಲಿಸಿ 18 ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಸರ್ಕಾರಿ ಉದ್ಯೋಗದಲ್ಲಿ ಕೆಲಸ ಮಾಡುವ ಮಹಿಳೆಯರು ಸೇರಿ ಇಡೀ ದೇಶದಲ್ಲಿ ಮೊದಲ ಬಾರಿಗೆ ಐಟಿ-ಬಿಟಿ, ಖಾಸಗಿ ಕಂಪನಿ, ಕೈಗಾರಿಕೆ, ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ತಿಂಗಳಿಗೆ ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ಋತುಚಕ್ರ ರಜೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.