ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರಿಗೆ ಬಿಜೆಪಿಯಲ್ಲಿ ಯಾವ ಸ್ಥಾನಮಾನವೂ ಇಲ್ಲ. ಕೇವಲ ಯೂಸ್ ಆ್ಯಂಡ್ ಥ್ರೋವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಮೇಲಿರುವ ನಟ ದರ್ಶನ್‌ಗೆ ಮೈಸೂರಿಗೆ ಹೋಗಲು ಮತ್ತೆ ಅನುಮತಿಸಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆದೇಶಿಸಿದೆ.
ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲು ಪಡೆಯಲು ನಿರಂತರ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇರೆಗೆ ಭ್ರಷ್ಟರ ಬೇಟೆಯಾಡಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರು, ಬೆಳಗಾವಿ ಸೇರಿ ಐದು ಜಿಲ್ಲೆಗಳ ಏಳು ಅಧಿಕಾರಿಗಳಿಗೆ ಸೇರಿದ 27 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ₹18.45 ಕೋಟಿ ಮೌಲ್ಯದ ನಗ-ನಾಣ್ಯ ಪತ್ತೆ ಹಚ್ಚಲಾಗಿದೆ.
ಕೆಎಎಸ್ ನೇಮಕಾತಿ ಪೂರ್ವಭಾವಿ ಮರುಪರೀಕ್ಷೆಯ ಎರಡು ಪತ್ರಿಕೆಗಳಲ್ಲಿ 79 ದೋಷಗಳಿದ್ದರೂ ಕೆಪಿಎಸ್‌ಸಿ ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡಿರುವುದರಿಂದ ಕನ್ನಡ ಅಭ್ಯರ್ಥಿಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ನಗರದಲ್ಲಿ ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡು ಬರೋಬ್ಬರಿ 608 ಆಸ್ತಿಗಳನ್ನು ಹರಾಜು ಹಾಕುವುದಾಗಿ ಆಯಾ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಕಂದಾಯ ವಿಭಾಗದಿಂದ ನೋಟಿಸ್ ನೀಡಲಾಗಿದೆ.
ಕೇಂದ್ರ ರೇಷ್ಮೇ ಮಂಡಳಿ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಡುವಿನ ನಮ್ಮ ಮೆಟ್ರೋ ಮಾರ್ಗಕ್ಕಾಗಿ ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ 65 ಮೀ. ಉದ್ದದ ಸಂಯೋಜಿತ ಗರ್ಡರ್‌ನ್ನು ಸೋಮವಾರ ಯಶಸ್ವಿಯಾಗಿ ಅಳವಡಿಸಲಾಗಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾಧವ್ ರಾವ್ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.