ನಗರದಲ್ಲಿ ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡು ಬರೋಬ್ಬರಿ 608 ಆಸ್ತಿಗಳನ್ನು ಹರಾಜು ಹಾಕುವುದಾಗಿ ಆಯಾ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಕಂದಾಯ ವಿಭಾಗದಿಂದ ನೋಟಿಸ್ ನೀಡಲಾಗಿದೆ.
ಕೇಂದ್ರ ರೇಷ್ಮೇ ಮಂಡಳಿ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಡುವಿನ ನಮ್ಮ ಮೆಟ್ರೋ ಮಾರ್ಗಕ್ಕಾಗಿ ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ 65 ಮೀ. ಉದ್ದದ ಸಂಯೋಜಿತ ಗರ್ಡರ್‌ನ್ನು ಸೋಮವಾರ ಯಶಸ್ವಿಯಾಗಿ ಅಳವಡಿಸಲಾಗಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾಧವ್ ರಾವ್ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.
ವಿಧಾನಸೌಧದ ಸಚಿವಾಲಯದ ಭದ್ರತಾ ವ್ಯವಸ್ಥೆಯನ್ನು ಪರಿಷ್ಕರಿಸಿ ಮುಖ್ಯ ಭದ್ರತಾ ಅಧಿಕಾರಿ ಹುದ್ದೆ ರದ್ದುಪಡಿಸಿದ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳು ಪತ್ರ ಬರೆದು ತೀವ್ರ ಅಸಮಾಧಾನ
ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ಸದಾ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ಕಾನ್‌ಸ್ಟೇಬಲ್‌ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.3ಕ್ಕೆ ಹೆಚ್ಚಿಸುವ ಜೊತೆಗೆ ಡಿವೈಎಸ್‌ಪಿ ಹುದ್ದೆಗೆ ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.
ದೇವಾಂಗ ಸಮುದಾಯದ ಶೇ.80 ಹೆಚ್ಚಿನ ಜನರು ಇಂದಿಗೂ ನೇಕಾರಿಕೆಯನ್ನೇ ಅವಲಂಬಿಸಿದ್ದಾರೆ. ಕೊರೋನಾ ಬಳಿಕ ಇವರ ನೇಕಾರಿಕೆ ಉದ್ಯಮ ಸಂಪೂರ್ಣ ನೆಲಕಚ್ಚಿದ್ದು, ಶೇ.80ರಷ್ಟು ಕೈಮಗ್ಗಗಳು ಕಣ್ಮರೆ-ಅಳಿವಿನಂಚಿನಲ್ಲಿವೆ ಎಂದು ಅಧ್ಯಯನಾವರದಿಯೊಂದು ತಿಳಿಸಿದೆ.
ಪ್ರಯಾಗ್‌ರಾಜನ ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟಿರುವ ಬೆಳಗಾವಿ ಮೂಲದ ನಾಲ್ವರ ಕುಟುಂಬದವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.