30 ರಿಂದ 32 ಲಕ್ಷ ನಿವೇಶನ-ಅಸ್ತಿಗಳಿಗೆ ಯಾವುದೇ ಎಲೆಕ್ಟ್ರಾನಿಕ್ ದಾಖಲೆ (ಇ-ದಾಖಲೆ) ಇಲ್ಲ. ಈ ಎಲ್ಲಾ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಎಲೆಕ್ಟ್ರಾನಿಕ್ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಜಾರಿ ನಿರ್ದೇಶನಾಲಯವು (ಇ.ಡಿ) ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ನೋಟಿಸ್ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಸಾಲ ಮರುಪಾವತಿಗಾಗಿ ಮನೆ ಜಪ್ತಿ ಮಾಡಿದ್ದರಿಂದ ಮನನೊಂದ ಯುವಕನೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ
ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದ ನಾಡದೇವಿ ಭುವನೇಶ್ವರಿಯ ಬೃಹತ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಸೋಮವಾರ ಅದ್ದೂರಿಯಾಗಿ ನೆರವೇರಿತು.
ನಗರದ ಯಲಹಂಕ ಏರ್‌ಫೋರ್ಸ್ ಸ್ಟೇಷನ್‌ನಲ್ಲಿ ಫೆ.10ರಿಂದ 14ರವರೆಗೆ ನಡೆಯಲಿರುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ-2025’ರಲ್ಲಿ ಯುದ್ಧ ವಿಮಾನಗಳ ಹಾರಾಟ ಪ್ರದರ್ಶನವನ್ನು ವೀಕ್ಷಿಸಲು ಸಾರ್ವಜನಿಕರಿಗೆ 1,000 ರು. ಶುಲ್ಕ ನಿಗದಿ
ಪೀಣ್ಯ ಮೇಲ್ಸೇತುವೆ ಮೇಲೆ ‘ಪೀಕ್ ಅವರ್’ನಲ್ಲಿ ಸಂಚರಿಸಲು ಸಂಚಾರ ಪೊಲೀಸರು ಅವಕಾಶ ನೀಡದಿರುವುದಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮದ ಹಲವು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೆಟ್ರೋ ರೈಲು ಪ್ರಯಾಣ ದರ ಪರಿಷ್ಕರಿಸುವ ಸಂಬಂಧ ಅನುಸರಿಸಿದ ಮಾನದಂಡ, ಅಧ್ಯಯನ ಕುರಿತ ವರದಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿರುವುದಾಗಿ ಮೂಲಗಳು ತಿಳಿಸಿವೆ.