ಸಾರಾಂಶ
ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬುಧವಾರದಿಂದ ಮೂರ್ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ.
ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬುಧವಾರದಿಂದ ಮೂರ್ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ತೀವ್ರಗೊಂಡಿರುವ ಪರಿಣಾಮ ಬುಧವಾರ ಉತ್ತರ ಒಳನಾಡಿನ ಬೀದರ್, ಕಲಬುರಗಿ ಹಾಗೂ ಯಾದಗಿರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಳೆಯೊಂದಿಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.
ಗುರುವಾರ, ಶುಕ್ರವಾರ, ಶನಿವಾರ ಉತ್ತರ ಒಳನಾಡಿನ ಮತ್ತಷ್ಟು ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ. ಶುಕ್ರವಾರ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇರಲಿದೆ.
ಭಾನುವಾರದಿಂದ ದಕ್ಷಿಣ ಒಳನಾಡಿನಲ್ಲಿ, ಸೆ.15ರ ನಂತರ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕ್ಷೀಣಿಸಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
;Resize=(690,390))
)
)

;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))