ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಪೂರ್ವ ಮಳೆ : ನಾಲ್ಕೈದು ದಿನ ಗುಡುಗು ಸಹಿತ ಮಳೆ-ಎಲ್ಲೆಲ್ಲಿ ?

| N/A | Published : Mar 23 2025, 09:13 AM IST

Rain Alert On 22 march
ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಪೂರ್ವ ಮಳೆ : ನಾಲ್ಕೈದು ದಿನ ಗುಡುಗು ಸಹಿತ ಮಳೆ-ಎಲ್ಲೆಲ್ಲಿ ?
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾನುವಾರದಿಂದ ಮತ್ತಷ್ಟು ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾನುವಾರದಿಂದ ಮತ್ತಷ್ಟು ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವ ಮುಂಗಾರು ಮಾರುತಗಳು ಚುರುಕುಗೊಂಡಿರುವುದರಿಂದ ರಾಜ್ಯದಲ್ಲಿ ಮಳೆ ಆರಂಭಗೊಂಡಿದೆ. ಶುಕ್ರವಾರದಂದು ಕಲಬುರಗಿ, ರಾಯಚೂರು ಮತ್ತಿತರ ಕಡೆ ಮಳೆಯಾಗಿತ್ತು.. ಶನಿವಾರ ರಾಜಧಾನಿ ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಬೀದರ್‌ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ.

ಭಾನುವಾರ ದಕ್ಷಿಣ ಒಳನಾಡಿನ ವಿವಿಧ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಸೋಮವಾರದಿಂದ ನಾಲ್ಕೈದು ದಿನ ರಾಜ್ಯಾದ್ಯಂತ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು, ಆಲಿಕಲ್ಲು ಹೊಡೆತಕ್ಕೆ ತರಕಾರಿ, ಹಣ್ಣಿನ ಬೆಳೆಗಳಿಗೆ ಹಾನಿಯಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರ, ಪೊನ್ನಂಪೇಟೆ, ನಾಲ್ಕೇರಿ, ಶ್ರೀಮಂಗಲ, ಕಾನೂರು, ಹೈಸೊಡ್ಲೂರು, ಕುಟ್ಟಂದಿ, ಮೂರ್ನಾಡು ಮತ್ತಿತರ ಕಡೆಗಳಲ್ಲಿ ಮಳೆಯಾಗಿದೆ.

ಇನ್ನೂ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಗೆ ಜನಜೀವನ ಅಸ್ಥವ್ಯವಸ್ಥಗೊಂಡಿದ್ದು, ಮರದ ಕೊಂಬೆ ಬಿದ್ದು, 3 ವರ್ಷದ ಮಗು ಮೃತಪಟ್ಟಿದೆ. ಯಲಹಂಕ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದರೆ, ಕೋಗಿಲು ಕ್ರಾಸ್‌ ಸೇರಿದಂತೆ ಮೊದಲಾದ ಕಡೆ ರಸ್ತೆಗಳಲ್ಲಿ ಭಾರೀ ಪ್ರಮಾಣ ನೀರು ವಾಹನ ಸವಾರರು ಸಂಚಾರ ಮಾಡಲು ಹರಸಾಹಸ ಪಡಬೇಕಾಯಿತು.

ಇನ್ನೂ ನಾಲ್ಕೈದು ದಿನ ಎಲ್ಲೆಡೆ  ಗುಡುಗು ಸಹಿತ ಮಳೆ ಸಾಧ್ಯತೆ