ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಪೂರ್ವ ಮುಂಗಾರಿನ ಬಿತ್ತನೆ ಪ್ರಮಾಣದಲ್ಲಿ ಭಾರೀ ಕುಂಠಿತವಾಗಿದೆ. ಒಟ್ಟಾರೆ 2.78 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಇಲಾಖೆ ಬಿತ್ತನೆ ಗುರಿ ಹೊಂದಿದ್ದು, ಆದರೆ 1.62 ಲಕ್ಷ ಹೆಕ್ಟೇರ್‌ನಲ್ಲಿ(ಶೇ.58) ಮಾತ್ರ ಬಿತ್ತನೆಯಾಗಿದೆ.

ಬೆಂಗಳೂರು : ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಪೂರ್ವ ಮುಂಗಾರಿನ ಬಿತ್ತನೆ ಪ್ರಮಾಣದಲ್ಲಿ ಭಾರೀ ಕುಂಠಿತವಾಗಿದೆ. ಒಟ್ಟಾರೆ 2.78 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಇಲಾಖೆ ಬಿತ್ತನೆ ಗುರಿ ಹೊಂದಿದ್ದು, ಆದರೆ 1.62 ಲಕ್ಷ ಹೆಕ್ಟೇರ್‌ನಲ್ಲಿ(ಶೇ.58) ಮಾತ್ರ ಬಿತ್ತನೆಯಾಗಿದೆ.

51 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬಿತ್ತುವ ಗುರಿ

51 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬಿತ್ತುವ ಗುರಿ ಇತ್ತಾದರೂ 38 ಸಾವಿರ ಹೆಕ್ಟೇರ್‌ನಲ್ಲಿ (ಶೇ.74) ಮಾತ್ರ ಬಿತ್ತನೆಯಾಗಿದೆ. ಒಟ್ಟಾರೆ 1.51 ಲಕ್ಷ ಹೆಕ್ಟೇರ್‌ನಲ್ಲಿ ಆಹಾರ ಧಾನ್ಯ ಬಿತ್ತನೆ ಅಂದಾಜಿದ್ದು. ಇದಕ್ಕೆ ಬದಲಾಗಿ 77 ಸಾವಿರ ಹೆಕ್ಟೇರ್‌(ಶೇ.51)ನಲ್ಲಿ ಬಿತ್ತನೆಯಾಗಿದೆ. ಸೂರ್ಯಕಾಂತಿ, ಶೇಂಗಾ ಸೇರಿ 26 ಸಾವಿರ ಹೆಕ್ಟೇರ್‌ನಲ್ಲಿ ಎಣ್ಣೆಕಾಳುಗಳ ಬೆಳೆ ಬೆಳೆಯುವ ಅಂದಾಜಿತ್ತು. ಆದರೆ, 16 ಸಾವಿರ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿ ಶೇ.42 ರಷ್ಟು ಸಾಧನೆಯಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ 16 ಸಾವಿರ ಹೆಕ್ಟೇರ್‌ ಬಿತ್ತನೆ ಗು

ಪೂರ್ವ ಮುಂಗಾರಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 16 ಸಾವಿರ ಹೆಕ್ಟೇರ್‌ ಬಿತ್ತನೆ ಗುರಿ ಇದ್ದು, 28 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿ ಶೇ.175 ರಷ್ಟು ಸಾಧನೆಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್‌(ಶೇ.71), ಚಾಮರಾಜನಗರ 28 ಸಾವಿರ ಹೆಕ್ಟೇರ್‌(ಶೇ.55), ಮೈಸೂರಿನ 1.63 ಲಕ್ಷ ಹೆಕ್ಟೇರ್‌ ಗುರಿ ಪೈಕಿ ಶೇ.54 ರಷ್ಟು ಬಿತ್ತನೆಯಾಗಿದೆ. ಆದರೆ ಇನ್ನುಳಿದ ಜಿಲ್ಲೆಗಳಲ್ಲಿ ಬಿತ್ತನೆ ಬಹಳಷ್ಟು ಕಡಿಮೆಯಾಗಿದೆ.