ಸಾರಾಂಶ
ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಹುಲ್ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ಅನೇಕ ಗೋಲ್‌ಮಾಲ್‌ಗಳು ಬೆಳಕಿಗೆ ಬಂದಿವೆ ಎಂದು ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾನದ ಕುರಿತು ಆಂತರಿಕ ತನಿಖೆ ನಡೆಸಿದ್ದೇನೆ. ಈ ವೇಳೆ ಅನೇಕ ಅಕ್ರಮಗಳು ಬೆಳಕಿಗೆ ಬಂದಿವೆ. ಈ ವಿಚಾರವಾಗಿ ಸದ್ಯ ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಮುಂದೆ ಈ ವಿಚಾರವಾಗಿ ಹೇಳುತ್ತೇನೆ ಎಂದು ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆ ವೇಳೆ ಕರ್ನಾಟಕ ಲೋಕಸಭಾ ಕ್ಷೇತ್ರವೊಂದರಲ್ಲಿ ‘ಭಯಂಕರ ಮತಗಳ್ಳತನ’ ಆಗಿರುವುದು ಬೆಳಕಿಗೆ ಬಂದಿದೆ. ಇದನ್ನು ಶೀಘ್ರದಲ್ಲೇ ಸಾಕ್ಷ್ಯಸಮೇತ ಬಹಿರಂಗಪಡಿಸಲಾಗುವುದು. ಯಾರು ಮತ್ತು ಹೇಗೆ ಅಕ್ರಮ ಮಾಡಿದ್ದಾರೆಂಬುದು ಬೆಳಕಿಗೆ ಬಂದಿದೆ ಎಂದು ರಾಹುಲ್ ಗಾಂಧಿ ಬುಧವಾರವಷ್ಟೇ ಹೇಳಿಕೊಂಡಿದ್ದರು.