ಸಾರಾಂಶ
ರಾಜ್ಯದಲ್ಲಿ ಪೊಲೀಸ್ ಪೇದೆ ಹುದ್ದೆ ನೇಮಕಾತಿ ವಯೋಮಿತಿ ಸಡಿಸಲು ಮನವಿ ಮಾಡಲಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಪೇದೆ ಹುದ್ದೆ ನೇಮಕಾತಿ ವಯೋಮಿತಿ ಸಡಿಸಲು ಮನವಿ ಮಾಡಲಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ವಯೋಮಿತಿ ಸಡಿಲಿಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬೇರೆಬೇರೆ ರಾಜ್ಯದಲ್ಲಿ ಏನಿದೆ ಎಂಬುದನ್ನು ಪರಿಶೀಲನೆ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ವಯೋಮಿತಿ ಎಷ್ಟು ವರ್ಷ ಇದೆ ಎಂದು ಪರಿಶೀಲಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಸೂಚನೆ ಕೊಟ್ಟಿದ್ದೇನೆ. ಪ್ರಸ್ತಾವನೆ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಸುಮಾರು ವರ್ಷಗಳಿಂದ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಎರಡು, ಮೂರು ವರ್ಷ ವಯೋಮಿತಿ ಹೆಚ್ಚಳ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಡಿಜಿಯವರಿಗೆ ಸೂಚನೆ ಕೊಟ್ಟಿದ್ದೇನೆ ಎಂದ ಅವರು, ಪೊಲೀಸ್ ದಂಪತಿ ಅಂತರ್ ಜಿಲ್ಲಾ ವರ್ಗಾವಣೆ ಸರ್ಕಾರದ ಆದೇಶದಂತೆ ನಡೆಯುತ್ತಿದೆ. ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದರು.
ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ!
ಪೊಲೀಸ್ ಪೇದೆ ಹುದ್ದೆ ನೇಮಕಾತಿ ವಯೋಮಿತಿ ಸಡಿಲಿಕೆ ಕುರಿತು ಶುಕ್ರವಾರ ‘ಕನ್ನಡಪ್ರಭ’ ವಿಶೇಷ ವರದಿಯನ್ನು ಪ್ರಕಟಿಸಿತ್ತು.