ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 2027ರ ಮಾ. 22ರಿಂದ ಏ. 5 ರವರೆಗೆ, ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು 2027ರ ಫೆ.27ರಿಂದ ಮಾ.17ರವರೆಗೆ ನಡೆಸಲು ಉದ್ದೇಶಿಸಲಾಗಿದೆ.
ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಈ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಬೇಕು. ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಎಸ್ಸೆಸ್ಸೆಲ್ಸಿ ವೇಳಾಪಟ್ಟಿಗೆ ಸಂಬಂಧಿಸಿದ ಆಕ್ಷೇಪಗಳನ್ನು dpikseab@gmail.com ಹಾಗೂ ದ್ವಿತೀಯ ಪಿಯುಸಿ ವೇಳಾಪಟ್ಟಿಗೆ ಸಂಬಂಧಿಸಿದ ಆಕ್ಷೇಪಗಳನ್ನು directorpuekseab@gmail.com ಗೆ ಅಕ್ಟೋಬರ್ 22ರೊಳಗೆ ಸಲ್ಲಿಸಲು ಮಂಡಳಿ ಸೂಚಿಸಿದೆ.
ಪರೀಕ್ಷೆ 2:
ಇದರ ಜೊತೆಗೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ -2ರ ತಾತ್ಕಾಲಿಕ ವೇಳಾಪಟ್ಟಿಯನ್ನೂ ಮಂಡಳಿ ಪ್ರಕಟಿಸಿದ್ದು, ಆಕ್ಷೇಪಣೆ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗೆ https://kseab.karnataka.gov.in ಗೆ ಭೇಟಿ ನೀಡಬಹುದು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ
ಮಾ. 22: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ)
ಮಾ. 25: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ
ಮಾ.27: ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಮಾ.30: ಗಣಿತ, ಸಮಾಜಶಾಸ್ತ್ರ
ಏ. 2: ತೃತೀಯ ಭಾಷೆ(ಹಿಂದಿ, ಹಿಂದಿ(ಎನ್‌ಸಿಇಆರ್‌ಟಿ), ಕನ್ನಡ(ಪುನರಾವರ್ತಿತರಿಗೆ ಮಾತ್ರ), ಉರ್ದು, ತುಳು, ಇಂಗ್ಲಿಷ್, ಸಂಸ್ಕೃತ, ಕೊಂಕಣಿ, ತೆಲುಗು, ತಮಿಳು, ಮರಾಠಿ) ಹಾಗೂ ಎನ್‌ಎಸ್‌ಕ್ಯೂಎಫ್ ವಿಷಯಗಳು,
ಏ.3: ಜೆಟಿಎಸ್ ವಿಷಯಗಳು
ಏ. 5: ಸಮಾಜ ವಿಜ್ಞಾನ
*ದ್ವಿತೀಯ ಪಿಯು ಪರೀಕ್ಷೆ-
1 ತಾತ್ಕಾಲಿಕ ವೇಳಾಪಟ್ಟಿ
ಫೆ.27: ಕನ್ನಡ, ಅರೇಬಿಕ್
ಮಾ.1: ಇಂಗ್ಲಿಷ್
ಮಾ.2: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.3: ಭೂಗೋಳಶಾಸ್ತ್ರ, ಮನಃಶಾಸ್ತ್ರ
ಮಾ.4: ಸಮಾಜಶಾಸ್ತ್ರ, ಭೌತಶಾಸ್ತ್ರ
ಮಾ.5: ಲೆಕ್ಕಶಾಸ್ತ್ರ
ಮಾ.8: ರಸಾಯನಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
ಮಾ.9: ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ
ಮಾ.11: ಹಿಂದುಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪು ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್ , ಹೆಲ್ತ್‌ಕೇರ್ , ಬ್ಯೂಟಿ ಅಂಡ್ ವೆಲ್‌ನೆಸ್
ಮಾ.12: ವ್ಯವಹಾರ ಅಧ್ಯಯನ, ಗಣಿತ
ಮಾ.13: ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಗೃಹವಿಜ್ಞಾನ
ಮಾ.15: ರಾಜ್ಯಶಾಸ್ತ್ರ, ಜೀವಶಾಸ್ತ್ರ, ಗಣಕಶಾಸ್ತ್ರ
ಮಾ.16: ಇತಿಹಾಸ, ಸಂಖ್ಯಾಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ
ಮಾ.17: ಹಿಂದಿ
