ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌, ಮೊಬೈಲ್‌ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌, ಮೊಬೈಲ್‌ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

https://karresults.nic.in ವೆಬ್‌ಸೈಟ್

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in ವೆಬ್‌ಸೈಟ್ ಮತ್ತು ‘ಕರ್ನಾಟಕ ಒನ್‌’ ಮೊಬೈಲ್‌ ಆ್ಯಪ್‌ ಮೂಲಕವೂ ಪಡೆಯಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸಪ್‌/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.

ಡಿಜಿಲಾಕರ್‌ನಲ್ಲಿ ಇಂದೇ ಅಂಕಪಟ್ಟಿ

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆಯ ಸಮಯದಲ್ಲೇ ಅವರ ಅಂಕಪಟ್ಟಿಗಳನ್ನೂ ಡಿಜಿಲಾಕರ್‌ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ. https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಮಂಡಳಿ ಮಾಹಿತಿ ನೀಡಿದೆ. 

ಅಂಕಪಟ್ಟಿಯನ್ನು ಡಿಜಿಲಾಕರ್‌ ಮೂಲಕ ಯಾವ ರೀತಿ ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎನ್ನುವ ಮಾಹಿತಿಯನ್ನು https://tinyurl.com/mw84wmh9 ನಲ್ಲಿ ತಿಳಿದುಕೊಳ್ಳಬಹುದು.