ಉಪಟಳ ತಡೆಯುವ ನಿಟ್ಟಿನಲ್ಲಿ ಮಲೆನಾಡಿನ ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆ : ಸ್ಥಳಾಂತರ ಭರವಸೆ

| Published : Dec 07 2024, 11:14 AM IST

Wild Elephant

ಸಾರಾಂಶ

ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ತಡೆಯುವ ನಿಟ್ಟಿನಲ್ಲಿ ರೇಡಿಯೊ ಕಾಲರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಆನೆಗಳನ್ನು ಶಾಶ್ವತವಾಗಿ ಸ್ಥಳಾಂತರ ಮಾಡುತ್ತೇವೆಂದು ಅರಣ್ಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಶಾಸಕ ಎಚ್‌.ಕೆ.ಸುರೇಶ್ ತಿಳಿಸಿದರು.

ಬೇಲೂರು: ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ತಡೆಯುವ ನಿಟ್ಟಿನಲ್ಲಿ ರೇಡಿಯೊ ಕಾಲರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಆನೆಗಳನ್ನು ಶಾಶ್ವತವಾಗಿ ಸ್ಥಳಾಂತರ ಮಾಡುತ್ತೇವೆಂದು ಅರಣ್ಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಶಾಸಕ ಎಚ್‌.ಕೆ.ಸುರೇಶ್ ತಿಳಿಸಿದರು. 

ಹಾಸನ ಜಿಲ್ಲೆಯ ಬೇಲೂರು ಸಮೀಪದ ಬಿಕ್ಕೋಡು ಆನೆ ಕ್ಯಾಂಪ್ ಬಳಿ ಶುಕ್ರವಾರ ಸಾಕಾನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾಲರ್ ಅಳವಡಿಸಲು ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸುಮಾರು 58 ಕಾಡಾನೆಗಳು ಬೀಡು ಬಿಟ್ಟಿದ್ದು, ಸುತ್ತಮುತ್ತಲ ಜನರು ಪ್ರತಿನಿತ್ಯ ಭಯದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ, ಎಲ್ಲಾ ಕಾಡಾನೆಗಳನ್ನು ಸ್ಥಳಾಂತರ ಮಾಡಿದರೆ ರೈತರ ಬೆಳೆ ನಷ್ಟವಾಗುವುದು ತಪ್ಪುತ್ತದೆ. ಈ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿಯೂ ಚರ್ಚಿಸಲಾಗುವುದು ಎಂದರು.

ಮೈಸೂರು ದಸಾರದಲ್ಲಿ ಭಾಗಿಯಾಗಿದ್ದ ಸಾಕಾನೆ ಭೀಮ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಏಕಲವ್ಯ, ಶ್ರೀರಾಮ, ಲಕ್ಷ್ಮಣ, ಕಂಜನ್, ಈಶ್ವರ ಸೇರಿ ಒಟ್ಟು 6 ಆನೆಗಳು ಭಾಗಿಯಾಗಿವೆ.

ಈ ವೇಳೆ ಸಿಸಿಎಫ್ ರವಿಶಂಕರ್, ತಹಶಿಲ್ದಾರ್ ಎಂ.ಮಮತಾ, ಡಿಸಿಎಫ್ ಪುಲಿಕಿತ್ ಮೀನಾ, ಎಸಿಎಫ್ ಶರೀಫಾ, ಆರ್‌ಎಫ್ಒ ಯತೀಶ್ ಇತರರಿದ್ದರು.